ಬೆಳಗಾವಿ : ಬೆಳಗಾವಿ ಗಡಿ ವಿವಾದವನ್ನು ಕೆಣಕುತ್ತಿರುವ ಮಹಾರಾಷ್ಟ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ಜತ್ ತಾಲೂಕನು ಕರ್ನಾಟಕಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಬೆಳಗಾವಿ ಗಡಿ ವಿವಾದ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸರ್ವಪಕ್ಷದ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಬೆಳಗಾವಿ ಗಡಿ ವಿವಾದದ ಕುರಿತು ಚರ್ಚಿಸಲು ಬರುವಂತೆ ಸಿಎಂ ಬೊಮ್ಮಾಯಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸರ್ವಪಕ್ಷಗಳ ಜೊತೆ ಚರ್ಚೆ ಮಾಡಲು ಸಿಎಂ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ನವೆಂಬರ್ 23 ನಡೆಯಲಿದ್ದು, ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ.
ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಹಲವು ಭಾಗಗಳು ತನ್ನದೆಂದು ವಾದಿಸಿ ಕಾನೂನು ಹೋರಾಟ ನಡೆಸುತ್ತಿರುವ ಮಹಾರಾಷ್ಟ್ರ ಸರ್ಕಾರ, ಈ ನಿಟ್ಟಿನಲ್ಲಿ ಕಾನೂನು ತಂಡಕ್ಕೆ ಸಹಕಾರ ನೀಡಲು ಮತ್ತು ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ನೇಮಕ ಮಾಡಿದೆ.
ಭಾಷಾವಾರು ಪ್ರಾಂತ್ಯ ರಚನೆಗಾಗಿ ಕೇಂದ್ರದಿಂದ 1953ರಲ್ಲಿ ಫಸಲ್ ಅಲಿ ನೇತೃತ್ವದ ಸಮಿತಿ ರಚನೆಯಾಗಿತ್ತು, 1955ರಲ್ಲಿ ಫಸಲ್ ಅಲಿ ಆಯೋಗದ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿ ಸೇರಿ 865 ಗಡಿ ಪ್ರದೇಶಗಳು ಮೈಸೂರು ರಾಜ್ಯಕ್ಕೆ ಸೇರ್ಪಡೆಯಾಗಬೇಕೆಂದು ವರದಿಯಲ್ಲಿತ್ತು.
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ ಮೆಹರ್ ಚಂದ್ ಮಹಾಜನ್ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿ 1967ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಮಹಾಜನ್ ವರದಿಯಲ್ಲೂ ಕೂಡ ಬೆಳಗಾವಿ ಸೇರಿ 865 ಪ್ರದೇಶಗಳು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಉಲ್ಲೇಖವಾಗಿದೆ. 2004ರಲ್ಲಿ ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರ ತಿರಸ್ಕರಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು,18 ವರ್ಷಗಳ ಬಳಿಕ ಸುಪ್ರಿಂ ಕೋರ್ಟ್ ಗಡಿ-ವಿವಾದ ಸಂಬಂಧ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸುತ್ತಿದೆ.
WATCH VIDEO: ಶಾಲೆಯೊಂದರ ಉದ್ಘಾಟನೆಗೆ ತಡವಾಗಿ ಆಹ್ವಾನ: ಸಿಟ್ಟಿಗೆದ್ದ ಟಿಆರ್ಎಸ್ ಶಾಸಕ ಮಾಡಿದ್ದೇನು ನೋಡಿ!
BIGG NEWS : ‘ಭದ್ರಾ ಮೇಲ್ದಂಡೆ’ ಯೋಜನೆಗೆ 3 ಸಾವಿರ ಕೋಟಿ ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ