ಬೆಂಗಳೂರು: ರಾಜ್ಯ ಸರ್ಕಾರದಿಂದ 2023, 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. 2023ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ ಶಿವಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಮಂಗಳೂರಿನ ವಾರ್ತಾಭಾರತಿಯ ಅಬ್ದುಸ್ಸಲಾಂ ಪುತ್ತಿಗೆ ಅವರಿಗೆ ನೀಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ ಅವರು ಮಾಹಿತಿ ಹಂಚಿಕೊಂಡಿದ್ದು, ಮಾಧ್ಯಮ ಅಕಾಡೆಮಿಯ 2023, 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹೀಗಿದೆ 2023, 2024ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ, ವಿವಿಧ ದತ್ತಿ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಶಿವಮೊಗ್ಗ: ಜ.4ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬಾಹ್ಯಾಕಾಶದಿಂದ ಸ್ಮಾರ್ಟ್ ಫೋನ್ ಮೂಲಕ ‘ಧ್ವನಿ ಕರೆ’ ಸಕ್ರಿಯಕ್ಕೆ ಇಸ್ರೋದಿಂದ ‘ಯುಎಸ್ ಉಪಗ್ರಹ’ ಉಡಾವಣೆ