ವಿಜಯಪುರ: ಕರ್ನಾಟಕದಲ್ಲಿ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬಾರದು ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆ ಮಾಡಿದ್ದಾರೆ. ಮಹಿಳೆಯರಿಗೆ ಉಚಿತವಾಗಿ ಕೊಟ್ಟು ಗಂಡಸರಿಂದ ಹೆಚ್ಚಿನ ದುಡ್ಡು ವಸೂಲಿ ಮಾಡುತ್ತಿದದಾರೆ. ಕರ್ನಾಟಕದಲ್ಲಿ ಗಂಡಸರು ಏನು ಪಾಪ ಮಾಡಿದ್ದರು ಅಂತ ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರ ಗಂಡಸರಿಗೆ ಅನ್ಯಾಯ ಮಾಡುತ್ತಿದೆ. ಇವರ ರಕ್ಷಣೆಗೆ ಹೆಣ್ಣುಮಕ್ಕಳು ಕೂಡ ನಿಲ್ಲಬೇಕು. ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬಾರದು. ಹೆಣ್ಣಮಕ್ಕಳು ಕೂಡ ಕಾಂಗ್ರೆಸ್ ಮತ ಹಾಕಬಾರದು ಅಂತ ಹೇಳಿದರು.
BIG NEWS: ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ ಘೋಷಣೆ
ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!