ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗು ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯ ಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು ಎಂದಿದ್ದಾರೆ.
ಈ ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 18, 2025
BREAKING: ಜನಿವಾರ ತೆಗೆಸಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಅಮಾನತು: ಶಿವಮೊಗ್ಗ ಡಿಸಿ ಆದೇಶ
SHOCKING : ಪತ್ನಿಯ ಪ್ರಿಯಕರನ ‘ಜನನಾಂಗ’ ಕತ್ತರಿಸಿ ಠಾಣೆಗೆ ತಂದ ಪತಿ : ಬೆಚ್ಚಿಬಿದ್ದ ಪೊಲೀಸ್ ಅಧಿಕಾರಿಗಳು!