ಬೆಂಗಳೂರು: ನ್ಯಾಯದಾನದಲ್ಲಿ ಕರ್ನಾಟಕ ಪೊಲೀಸರು ರಾಷ್ಟ್ರದಲ್ಲೇ ಮುಂಚೂಣಿಯಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿರುವುದಾಗಿ ಟಾಟಾ ಟ್ರಸ್ಟ್ ನ ಇಂಡಿಯನ್ ಜಸ್ಟಿಸ್ ರಿಪೋರ್ಟ್-2025ನಿಂದ ತಿಳಿದು ಬಂದಿದೆ.
ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್ ವರದಿ ನೀಡಿದೆ. ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.
ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ ಸಂಗ್ರಹಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವವರೆಗೆ ಪೊಲೀಸ್ ಇಲಾಖೆಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಎಲ್ಲಾ ಕಾರ್ಯಗಳನ್ನು ದೇಶದ ಎಲ್ಲಾ ರಾಜ್ಯಗಳಿಗಿಂತ ಬಹಳ ಯಶಸ್ವಿಯಾಗಿ ನಮ್ಮ ಕರ್ನಾಟಕ ಪೊಲೀಸ್ ಇಲಾಖೆಯು ಮಾಡುತ್ತಿರುವುದು ಅತ್ಯಂತ ಪ್ರಶಂಸನೀಯ ಮತ್ತು ಶ್ಲಾಘನೀಯ.
ಅಂತೆಯೇ, ನಾಗರಿಕರ ರಕ್ಷಣೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್ ವರದಿ ನೀಡಿದೆ. ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.
ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ… pic.twitter.com/tiJ9RRwLmu
— DIPR Karnataka (@KarnatakaVarthe) April 16, 2025
1ನೇ ತರಗತಿ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 5 ವರ್ಷ 5 ತಿಂಗಳು ನಿಗದಿ
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!