ಬೆಂಗಳೂರು: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ ಮಡಿವಾಳ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಆಧಾರ್ ಜೋಡಣೇಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜ ಸಲ್ಲಿಸುವಂತಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು http:/sevasindhu.karnataka.gov.in ಮೂಲಕ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರಾಜ್ಯದ ‘ಮಡಿವಾಳ ಸಮುದಾಯ’ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಗುತ್ತಿಗೆದಾರರೇ, ‘ಇಂಜಿನಿಯರ್’ಗಳೇ ಎಚ್ಚರ.! ‘ಅವೈಜ್ಞಾನಿಕ ರಸ್ತೆ ಕಾಮಗಾರಿ’ ನಡೆಸಿದ್ರೇ ‘ಕಾನೂನು ಕ್ರಮ ಫಿಕ್ಸ್’