ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಮತ್ತು ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆಪ್ಟೆಂಬರ್ 07 ರಿಂದ ಸೆಪ್ಟೆಂಬರ್ 17 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ “ಉಚಿತ ಪರೀಕ್ಷಾ ಪೂರ್ವ ತರಬೇತಿ”ಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 06 ರ ಸಂಜೆ 5 ಗಂಟೆ ಒಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಣಿ ಮಾಡತಕ್ಕದ್ದು, ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ತರಬೇತಿಗೆ ಸೆಪ್ಟೆಂಬರ್ 07 ರ ಬೆಳಿಗ್ಗೆ 10 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ (ಪ್ರಯಾಣ ಭತ್ಯೆ ಹಾಗೂ ಊಟದ ವ್ಯವಸ್ಥೆ ಇರುವುದಿಲ್ಲ) ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08192-259446 ಹಾಗೂ ಮೊಬೈಲ್ ಸಂಖ್ಯೆ 7406323294 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಉದ್ಯೋಗಾಧಿಕಾರಿ ಗಿರೀಶ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.