ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಇದರೊಂದಿಗೆ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸರಿದೆ ಗುಡ್ ನ್ಯೂಸ್ ಸಿಕ್ಕಿದೆ. ಅದೇ ಇನ್ಮುಂದೆ ಕನಿಷ್ಠ 2 ವರ್ಷಕ್ಕೊಮ್ಮೆ ಪೊಲೀಸರ ವರ್ಗಾವಣೆಯಾಗಲಿದೆ.
ಈ ಕುರಿತಂತೆ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿಯವರು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಬದಲಾವಣೆಗೆ ಮನವಿ ಮಾಡಿದ್ದರು. ಈ ಮನವಿಗೆ ಒಪ್ಪಿಗೆ ಸೂಚಿಸಿದ್ದಂತ ಅವರು, ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದರು. ಇಂತಹ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ.
ಇನ್ನೂ ಈ ಬೆನ್ನಲ್ಲೇ ವಿಧಾನ ಪರಿಷತ್ತಿನಲ್ಲಿಯೂ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಂಡಿಸಿದ್ದಾರೆ. ಇಲ್ಲಿಯೂ ಅಂಗೀಕಾರ ದೊರೆತರೇ, ಪೊಲೀಸರ ವರ್ಗಾವಣೆ ಮತ್ತಷ್ಟು ಸುಲಭವಾಗಲಿದೆ.
ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕರಾದಿಂದಾಗಿ ಕನಿಷ್ಠ 2 ವರ್ಷಕ್ಕೊಮ್ಮೆ ಪೊಲೀಸರ ವರ್ಗಾವಣೆಗೆ ಅಧಿಸೂಚನೆ ಹೊರ ಬೀಳಲಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸರಿಗೆ ಗುಡ್ ನ್ಯೂಸ್ ದೊರೆತಂತೆ ಆಗಲಿದೆ.
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
BREAKING : ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಫುಟ್ಬಾಲ್ ಆಟಗಾರ ‘ಡ್ಯಾನಿ ಅಲ್ವೆಸ್’ಗೆ 4.5 ವರ್ಷ ಜೈಲು