ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಬೆಂಗಳೂರು, ಹಾಸನ, ಮೈಸೂರು, ತುಮಕೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಮುಂದಿನ ನಾಲ್ಕು ದಿನ ಬೆಂಗಳೂರು, ಹಾಸನ, ಮೈಸೂರು, ತುಮಕೂರು, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ,ಗದಗ, ದಕ್ಷಿಣ ಕನ್ನಡ,ದಾವಣಗೆರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.