ಬೆಂಗಳೂರು : 2022 ನೇ ಸಾಲಿನ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, 67 ಮಂದಿ ಸಾಧಕರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ. ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸೇರಿ 67 ಮಂದಿ ಸಾಧಿಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿದ್ದು, ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ 2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ.