ಬೆಂಗಳೂರು : ಇಂದಿನಿಂದ 10 ದಿನಗಳ ಕಾಲದ ವರೆಗೆ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ನಡೆಯತ್ತಿದ್ದು, ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಈ ಮೂಲಕ ರಾಜ್ಯ ಸರ್ಕಾರ ರಾಜ್ಯಪಾಲರ ಮುಖಾಂತರ ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದೆ.
ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಿದ್ದು ಮೊದಲ ದಿನ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ವಿರುದ್ಧ ಟೀಕಿಸುವ ಮೂಲಕ ರಾಜ್ಯ ಸರ್ಕಾರ ಪರೋಕ್ಷವಾಗಿ ಹೇಳುವ ಪ್ರಯತ್ನ ಮಾಡಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಆದರೆ ಕೇಂದ್ರದಿಂದ ಅನುದಾನ ಪಡೆಯುವುದರಲ್ಲಿ ರಾಜ್ಯ 10ನೇ ಸ್ಥಾನದಲ್ಲಿದೆ. ಈ ಮೂಲಕ ಕೇಂದ್ರದಿಂದ ಪಾಲು ಪಡೆಯಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ವಿವಿಧ ಮೂಲಗಳಿಂದ ಸಿಗಬೇಕಾದ ಸಂಪನ್ಮೂಲಗಳು ಸಿಗುತ್ತಿಲ್ಲ ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯ ಕರ್ನಾಟಕ ಎಂದು ತಿಳಿಸಿದರು.
ದೇಶದಲ್ಲಿ ಅತೀ ಹೆಚ್ಚು ತರ್ಗ ಸಂಗ್ರಹಿಸಿ ಕೊಡುವ ರಾಜ್ಯ ಆದರೆ ತೆರಿಗೆ ಪಾಲು ಪಡೆಯುವಲ್ಲಿ ರಾಜ್ಯ 10ನೇ ಸ್ಥಾನದಲ್ಲಿದೆ ನಮಗೆ ನ್ಯಾಯ ಧರ್ಮದಲ್ಲಿ ಸಿಗಬೇಕಾದ ಪಾಲು ಸಿಗಬೇಕು, ರಾಜ್ಯದ ಪಾಲು ಪಡೆಯಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಅನುದಾನದ ತಾರತಮ್ಯ ಪ್ರಸ್ತಾಪ ಮಾಡಲಾಯಿತು. ಈ ಮೂಲಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ರಾಜ್ಯಪಾಲರ ಮೂಲಕ ಟೀಕಿಸಿದೆ.
ಅಲ್ಲದೆ ಇತ್ತೀಚಿಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕರು ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಪ್ರತಿಭಟನೆ ಮಾಡಿದರು. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಮುಖಾಂತರ ಕೇಂದ್ರ ಸರ್ಕಾರವನ್ನು ಟೀಕಿಸಿದೆ ಎಂದು ಹೇಳಲಾಗುತ್ತಿದೆ.