ದೇಶದಲ್ಲೇ ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಪ್ರಥಮ ಸ್ಥಾನ

ಬೆಂಗಳೂರು : ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು. 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ … Continue reading ದೇಶದಲ್ಲೇ ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಪ್ರಥಮ ಸ್ಥಾನ