ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜ್ಯೂನಿಯರ್ ಎನ್ ಟಿಆರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ವಿಶೇಷ ವಿಮಾನದಿಂದ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ. ಈ ವೇಳೆ ಸಚಿವರಾದ ಮುನಿರತ್ನ ಮತ್ತು ಡಾ. ಸುಧಾಕರ್ ಸ್ವಾಗತ ಕೋರಿದ್ದಾರೆ. ಇಂದು ಸಂಜೆ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಈ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ದಾರೆ. ಅವರು ಹೋಟೆಲ್ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ವಿಧಾನಸೌಧಕ್ಕೆ ಬರಲಿದ್ದಾರೆ. ಇನ್ನು ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಿದ್ದಾರೆ.