ಬೆಂಗಳೂರು: ಇಂದು ಸಂಜೆ ವಿಧಾನಸೌಧದ ಮುಂಭಾಗ ಡಾ.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಇನ್ನು, ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದು, ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ. ಮನೆಗೆ ಬಂದು ಅಪ್ಪು ಕುಟುಂಬ ಪುನೀತ್ ಫೋಟೋಗೆ ಪ್ರಶಸ್ತಿಯನ್ನು ಅರ್ಪಿಸಿದ್ದು, ಚಿನ್ನದ ಪದಕವನ್ನು ಅಪ್ಪು ಫೋಟೋಗೆ ಹಾಕಿದರು.
ಅಶ್ವಿನಿ ಹಾಗು ಪುತ್ರಿ ವಂದಿತಾ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಿಡಿದು ಪುನೀತ್ ಭಾವಚಿತ್ರದ ಮುಂದೆ ನಿಂತಿದ್ದರು. ನಿಜಕ್ಕೂ ಈ ದೃಶ್ಯ ಮನಕಲುಕುವಂತಿತ್ತು. ಈ ಪ್ರಶಸ್ತಿಯು 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದೆ.
ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಅಶ್ವಿನಿ
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನಮ್ಮ ಕುಟುಂಬಕ್ಕೆ ಆತ್ಮೀಯರು. ಅವರು ಮತ್ತು ಅವರು ಸರಕಾರ ಪುನೀತ್ ಅವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಎಲ್ಲರಿಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Rajkumar ) ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು.
ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್ಕುಮಾರ್ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್, ಜ್ಯೂ.ಎನ್ಟಿಆರ್ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ ನಟನಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮ ಆಗಮಕ್ಕೂ ಮುನ್ನ ಗಾಯಕರು ನಟ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಸಿನಿಮಾ ಹಾಡುಗಳನ್ನು ಹಾಡಿದ್ದರು.
BIGG NEWS : ಶೀಘ್ರದಲ್ಲೇ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಲು ಕಾರ್ಯಕ್ರಮ ಜಾರಿ : ಸಚಿವ ಸುಧಾಕರ್ ಘೋಷಣೆ
‘ಅಪ್ಪು’ ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿ – ಸಿಎಂ ಬಸವರಾಜ ಬೊಮ್ಮಾಯಿ | Karnataka Ratna Award