ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಪುನೀತ್ ನಮ್ಮನಗಲಿ ಒಂದು ವರ್ಷವಾದರೂ ಅವರ ಮೇಲಿನ ಅಭಿಮಾನ ಮಾತ್ರ ಹೆಚ್ಚಾಗುತ್ತಲೆ ಇದೆ. ಅವರ ಸಮಾಧಿಗೆ ನಿತ್ಯ ಸಾವಿರಾರು ಜನ ಬಂದು ಹೋಗುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಆರ್. ಅಶೋಕ್ ಹೇಳಿದರು.
ನಾಳೆ ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯುತ್ತಿದ್ದು, ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನೀಡಲಾಗುತ್ತಿರುವ ಕರ್ನಾಟಕದ ಪ್ರತಿಷ್ಠಿತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.
ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಪೂರ್ವ ತಯಾರಿಗಳ ಕುರಿತು ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹಾಗೂ ಸಚಿವ ಅಶೋಕ್ ಇಂದು ಸಿದ್ದತೆ ಪರಿಶೀಲಿಸಿದರು.
ನಾಳೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದಂತ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಜ್ಯ ಸರ್ಕಾರದಿಂದ ರಾಜ್ ಕುಟುಂಬಕ್ಕೆ ಪ್ರೀತಿಯ ಆಹ್ವಾನ ನೀಡಲಾಯಿತು.
ಇಂದು ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಕಂದಾಯ ಸಚಿವ ಆರ್ ಅಶೋಕ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.
ಅಂದಹಾಗೇ ನಾಳೆ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮಕ್ಕೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಹಾಗೂ ಸುಧಾಮೂರ್ತಿ ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.
Health Tips:ನೀವು ಇಯರ್ ಫೋನ್ ಗಳನ್ನು ಅತಿಯಾಗಿ ಬಳಸುತ್ತಿದ್ದೀರಾ? ಹಾಗಾದ್ರೇ ನಿಮ್ಮ ಹೃದಯ ಹುಶಾರ್
BIG BREAKING NEWS: ನಾಳೆ ಸಗಟು ವಿಭಾಗದ ಡಿಜಿಟಲ್ ರೂಪಾಯಿ ಬಿಡುಗಡೆ -RBI ಘೋಷಣೆ | Digital Rupee