ಬೆಂಗಳೂರು: ನ.1 ರಂದು ನಾಳೆ ಸಂಜೆ 4.00 ಗಂಟೆಗೆ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸ್ವೀಕಾರ ಮಾಡಲಿದ್ದಾರೆ.
ಈ ಹಿನ್ನೆಲೆ ಸಚಿವ ಹಾಗೂ ಪ್ರಶಸ್ತಿ ಉಸ್ತುವಾರಿ ಸಮಿತಿ ಆರ್ ಅಶೋಕ್ ಇಂದು ಬೆಂಗಳೂರಿನ ಸದಾಶಿನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಅಶ್ವಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಈ ವೇಳೆ ನಟ ರಾಘವೇಂದ್ರ ರಾಜ್ ಕುಮಾರ್ ಮತ್ತಿತರರು ಇದ್ದರು.
ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿಧಾನಸೌಧದ ಎದುರು ನಾಳೆ ಸಂಜೆ 4 ಗಂಟೆಗೆ ಈ ಸಮಾರಂಭ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ವಿಧಾನಸೌಧದ ಮುಂಭಾಗದ ರಸ್ತೆಯನ್ನು ಬ್ಲಾಕ್ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ 20 ಸಾವಿರ ಜನ ಸೇರುವ ಸಾಧ್ಯತೆ ಇದ್ದು, ಸೂಪರ್ ಸ್ಟಾರ್ ರಜಿನಿಕಾಂತ್ ಜ್ಯೂ.ಎನ್ಟಿಆರ್ ಆಗಮಿಸುತ್ತಿದ್ದಾರೆ.
ದಿವಂಗತ ಡಾ: ಪುನೀತ್ ರಾಜ್ ಕುಮಾರ್ ( Actor Dr Puneeth Rajkumar ) ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಯ ಪ್ರತಿಮೆ ಉದ್ಘಾಟನೆಯಾಗುತ್ತಿದೆ. ಕೆಂಪೇಗೌಡರು ಪ್ರಗತಿಯ ಸಂಕೇತವಾಗಿದ್ದು, ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಲಕ್ಷಾಂತರ ಜನ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ಹೇಳಿದರು.