ಬೆಂಗಳೂರು: ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಡೆಂಗ್ಯೂ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಿದರು.
ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಘಿ ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.
BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ