ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-1 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 2,871 ಕೇಂದ್ರಗಳಲ್ಲಿ ನಡೆಯಲಿದೆ. ಇಂತಹ ಪರೀಕ್ಷೆಯ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸುವ ಸಂಭಾವ್ಯ ದಿನಾಂಕವು 07-04-2026 ಆಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 24-04-2026ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 25-04-2026ರಿಂದ 09-05-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2 ದಿನಾಂಕ 18-05-2026ರಿಂದ 25-05-2026ರವರೆಗೆ ನಡೆಯಲಿದೆ. ಇದರ ಸಂಭಾವ್ಯ ಫಲಿತಾಂಶವನ್ನು ದ್ವಿತೀಯ ಪಿಯುಸಿ ಪರೀಕ್ಷೆ-2ರದ್ದು ದಿನಾಂಕ 22-05-2026, ಎಸ್ ಎಸ್ ಎಲ್ ಸಿ ಪರೀಕ್ಷೆ-2ರದ್ದು ದಿನಾಂಕ 01-06-2026ರಂದು ಪ್ರಕಟವಾಗುವ ಸಾಧ್ಯತೆ ಇದೆ ಅಂತ ಹೇಳಿದ್ದಾರೆ.

BIG BREAKING: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ








