ಬೆಂಗಳೂರು : 2022 ರ ಜನವರಿ/ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
ಗಣಕಯಂತ್ರ ಶಿಕ್ಷಣ ಪರೀಕ್ಷೆಯ ಆಫೀಸ್ ಅಟೋಮೇಷನ್ ಹಾಗೂ ಗ್ರಾಫಿಕ್ ಡಿಸೈನರ್ ಕೋರ್ಸ್ ಗಳ ಗಳ ಪರೀಕ್ಷೆಗೆ ದಿನಾಂಕ 06:12:2021 ರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ಪರೀಕ್ಷೆಗೆ ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದ್ದು, ಗಣಕ ಯಂತ್ರ ಶಿಕ್ಷಣ ಸಂಸ್ತೆಯ ಮುಖ್ಯಸ್ಥರು ತಮ್ಮ ಸಂಸ್ಥೆಯಿಂದ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಮಂಡಳಿಯ sslc.karnataka. gov in ಜಾಲತಾಣದಲ್ಲಿ Login/other exams/Computer examination ನಲ್ಲಿ institute login ಮೂಲಕ ಅಪ್ ಲೋಡ್ ಮಾಡಲು ಎಸ್ ಗೀತಾ ನಿರ್ದೇಶಕರು ಇವರು ಆದೇಶ ಹೊರಡಿಸಿದ್ದಾರೆ.
ಸರ್ಕಾರದದಿಂದ ನೊಂದಣಿಯಾದ ಮಾನ್ಯತೆ ಪಡೆದ ಕಂಪ್ಯೂಟರ್ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆಗೆ ಸಂಬಂಧಿಸಿದಂತೆ ಮಂಡಳಿಯು ನಡೆಸುವ ಆಫೀಸರ್ ಆಟೋಮೇಷನ್ ಹಾಗೂ ಗ್ರಾಫಿಕ್ ಡಿಸೈನರ್ ಕೋರ್ಸ್ ವಿಷಯಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿ ಹೊರಡಿಸಿರುವ ಈ ಅಧಿಸೂಚನೆ ವೀಕ್ಷಿಸಬಹುದಾಗಿದೆ.