ಬೆಂಗಳೂರೂ: : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 2024-25ನೇ ಸಾಲಿನ ಮಾರ್ಚ್ / ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ / ಏಪ್ರಿಲ್ 2024ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 25-03-2024 ರಿಂದ 06-04-2024 ರವರೆಗೆ ನಡೆಸಲು ತೀರ್ಮಾನಿಸಿದೆ. ದ್ವಿತೀಯ ಪಿಯುಸಿ(PUC) ಹಾಗೂ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. 2023-24 ನೇ ಸಾಲಿನ ವಾರ್ಷಿಕ ಪರೀಕ್ಷೆ -1ರ ಅಂತಿಮ
ವೇಳಾಪಟ್ಟಿ ಪ್ರಕಟ ಮಾಡಿದೆ.
ಈ ಕುರಿತು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಎಲ್ಲ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದೆ. ಪ್ರಥಮ ಭಾಷೆಗೆ 100 ಗರಿಷ್ಠ ಅಂಕಗಳು , ಉಳಿದ ವಿಷಯಗಳಿಗೆ ಪ್ರತಿ ವಿಷಯಕ್ಕೆ 80 ಅಂಕಗಳಂತೆ ಪರೀಕ್ಷೆ ನಿಗದಿಪಡಿಸಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ1.45ರವರೆಗೆ ಮತ್ತು ದ್ವಿತೀಯ, ತೃತೀಯ ಬಾಷೆ ಬೆಳಿಗ್ಗೆ10.30 ರಿಂದ ಮಧ್ಯಾಹ್ನ 1.30 ರವರೆಗೆ ಅವಧಿ ನಿಗದಿಪಡಿಸಲಾಗಿದೆ.
ದ್ವಿತೀಯ ಪಿಯುಸಿ(PUC) ವೇಳಾಪಟ್ಟಿ ಹೀಗಿದೆ