ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕೀ ಉತ್ತರಗಳನ್ನು ( Key Answer ) ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:04-04-2025 ಮಂಡಲಿಯ ಜಾಲತಾಣದಲ್ಲಿ http://kseab.karnataka.gov.in ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು / ಪೋಷಕರು / ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ.
ಇನ್ನೂ ಮಂಡಲಿಯ ಜಾಲತಾಣ http://kseab.karnataka.gov.in ಲಿಂಕನ್ನು ಬಳಸಿ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಮಂಡಲಿಯ ಜಾಲತಾಣದ ಮೂಲಕ ದಿನಾಂಕ:06-04-2025ರ ಸಾಯಂಕಾಲ 5.30 ಗಂಟೆಯವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು / ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷೆಗಳು ನಿರ್ದೇಶಕ ಗೋಪಾಲಕೃಷ್ಣ ಹೆಚ್.ಎನ್ ತಿಳಿಸಿದ್ದಾರೆ.
BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ
GOOD NEWS: ಶೀಘ್ರವೇ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ