ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಸಲು ತೀರ್ಮಾನಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದ್ದಾರೆ.
ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ
-ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.
-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್
-ದಿನಾಂಕ 19-06-2024ರ ಬುಧವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.
-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.
-ದಿನಾಂಕ 21-06-2024ರ ಶುಕ್ರವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
-ದಿನಾಂಕ 22-06-2024ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
ವರದಿ: ವಸಂತ ಬಿ ಈಶ್ವರಗೆರೆ
ಮೃತ ಅಂಜಲಿ ಕುಟುಂಬಕ್ಕೆ ಪರಿಹಾರ ಸಿಗದಿದ್ದರೆ ಸಿಎಂ ಭೇಟಿಯಾಗಿ ಮನವಿ ಸಲ್ಲಿಕೆ : ದಿಂಗಾಲೇಶ್ವರ ಶ್ರೀ
BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ