ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೇ, ಕಲಬುರ್ಗಿ ಕೊನೆಯ ಸ್ಥಾನವನ್ನು ಗಳಿಸಿದೆ. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 26-05-2025ರಿಂದ ಪರೀಕ್ಷೆ ಆರಂಭಗೊಂಡು, ದಿನಾಂಕ 02-06-2025ರವರೆಗೆ ನಡೆಯಲಿದೆ.
ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವಿಷಯವಾರು ವೇಳಾಪಟ್ಟಿ
- ದಿನಾಂಕ 26-05-2025ರಂದು ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇ ಆರ್ ಟಿ, ಸಂಸ್ಕೃತ.
- ದಿನಾಂಕ 27-05-2025ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
- ದಿನಾಂಕ 28-05-2025ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
- ದಿನಾಂಕ 29-05-2025ರಂದು ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
- ದಿನಾಂಕ 30-05-2025ರಂದು ತೃತೀಯ ಭಾಷೆ- ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯಗಳಾದಂತ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್.
- ದಿನಾಂಕ 31-05-2025ರಂದು ಕೋರ್ ಸಬ್ಜೆಕ್ – ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
- ದಿನಾಂಕ 02-06-2025ರಂದು ಜೆಟಿಎಸ್ ವಿಷಯಗಳಾದಂತ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- IV, ಪ್ರೋಗ್ರಾಮಿಂಗ್ ಇನ್ ANSI C, ಅರ್ಥಶಾಸ್ತ್ರ
ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಫಲಿತಾಂಶ ಪಡೆದಿರುವ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ದಿನಾಂಕ 03-05-2025ರಿಂದ 10-05-2025ರೊಳಗೆ ನೋಂದಾಯಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ 2025ರ ಪರೀಕ್ಷೆ-3 ದಿನಾಂಕ 23-06-2025ರಿಂದ 30-06-2025ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
BREAKING: ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ