ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬೆನ್ನಲ್ಲೆ ಪರೀಕ್ಷೆ-2, 3ಕ್ಕೆ ದಿನಾಂಕವನ್ನು ಮಂಡಳಿಯು ಪ್ರಕಟಿಸಿದೆ.
ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಎಸ್ ಎಸ್ ಎಲ್ ಸಿ 2025ರ ಪರೀಕ್ಷೆ-2 ದಿನಾಂಕ 26-05-2025ರಿಂದ ದಿನಾಂಕ 02-06-2025ರವರೆಗೆ ನಡೆಯಲಿದೆ ಎಂದಿದ್ದಾರೆ.
ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಫಲಿತಾಂಶ ಪಡೆದಿರುವ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ದಿನಾಂಕ 03-05-2025ರಿಂದ 10-05-2025ರೊಳಗೆ ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ 2025ರ ಪರೀಕ್ಷೆ-3 ದಿನಾಂಕ 23-06-2025ರಿಂದ 30-06-2025ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 8,42,173 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡವಾರು ಫಲಿತಾಂಶ 62.34 ಆಗಿದೆ. 2,26,367 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, 2,96,438 ವಿದ್ಯಾರ್ಥಿನಿಯರು ಉತ್ತೀರ್ಣರಾಗುವ ಮೂಲಕ, ಮೇಲುಗೈ ಸಾಧಿಸಿದ್ದಾರೆ.
ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ