ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಎನ್ನುವ ಬಗ್ಗೆ ಮುಂದೆ ಓದಿ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಜುಲೈ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನ್ನು ದಿನಾಂಕ:05.07.2025 ರಿಂದ 12.07.2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.
ರಿಸಲ್ಟ್ ಈ ರೀತಿ ಚೆಕ್ ಮಾಡಿ
ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು https://karresults.nic.in ಮತ್ತು https://kseab.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನೀಡಿ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ.
2025 ರ ಎಸ್ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶದ ಅಂಕಿ ಅಂಶಗಳು
1. 2025 ಎಸ್ ಎಸ್ ಎಲ್ ಸಿ ಪರೀಕ್ಷೆ – 3 ಅನ್ನು ದಿನಾಂಕ 05-07-2025 Do 12-07-2025 ರವರೆಗೆ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಯಿತು.
2. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 18-07-2025 ರಿಂದ 21-07-2025 ರವರೆಗೆ ರಾಜ್ಯದ 27 ಶೈಕ್ಷಣಿಕ ಜಿಲ್ಲೆಗಳ 88 ಮೌಲ್ಯಮಾಪನ ಕೇಂದ್ರಗಳಲ್ಲಿ 20443 ಮೌಲ್ಯಮಾಪಕರಿಂದ ನಡೆಸಲಾಯಿತು.
3. ವಿದ್ಯಾರ್ಥಿಗಳ ವೈಯಕ್ತಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ದಿನಾಂಕ 23-07-2025 ರಂದು https:/karresults.nic.in ಹಾಗೂ https://kseab.karnataka.gov.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
4. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ 23-07-2025 ರಂದು ಎಸ್.ಎಂ.ಎಸ್ ಮೂಲಕ ರವಾನಿಸಲಾಗುವುದು.
5. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseah.karriataka.gov.in ದ ಶಾಲಾ ಲಾಗಿನ್‌ನಲ್ಲಿ 23-07-2025 ರಂದು ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು ಎಂದಿದೆ.
BREAKING: ಬೆಂಗಳೂರಿನ ಉದ್ಯಮಿಗಳನ್ನು ಅಪಹರಿಸಿ ಆಂಧ್ರದಲ್ಲಿ ಬರ್ಬರ ಕೊಲೆ
BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ