ಬೆಂಗಳೂರು: ಈಗಾಗಲೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ( Karnataka Secondary Education Examination Board – KSEEB ) ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ( Karnataka SSLC Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಬಂದಂತ ಆಕ್ಷೇಪಗಳ ನಂತ್ರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದತ್ತಪೀಠ ವಿವಾದ : ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಎಂದ ಸಿ.ಟಿ ರವಿ |C.T Ravi

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಆ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ ತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.

ರಾಜ್ಯದ ಶಾಲಾ ಮಕ್ಕಳಿಗೆ ಬಹುಮುಖ್ಯ ಮಾಹಿತಿ: ಹೀಗಿದೆ 2022-23ನೇ ಸಾಲಿನ ‘ಬಾನ್ ದನಿ ರೇಡಿಯೋ ಪಾಠ’ ಪ್ರಸಾರ ವೇಳಾಪಟ್ಟಿ

ಹೀಗಿದೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ಅಂತಿಮ ವೇಳಾಪಟ್ಟಿ

  • ದಿನಾಂಕ 31-03-2023, ಶುಕ್ರವಾರ  – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
  • ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
  • ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
  • ದಿನಾಂಕ 10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
  • ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

ವರದಿ: ವಸಂತ ಬಿ ಈಶ್ವರಗೆರೆ

  

Share.
Exit mobile version