ಬೆಂಗಳೂರು: ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ( Karnataka SSLC Main Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ( Karnataka Secondary Education Examination Board – KSEEB ) ಪ್ರಕಟಿಸಿದೆ. ಪರೀಕ್ಷೆಯು ದಿನಾಂಕ 01-04-2023ರಿಂದ ದಿನಾಂಕ 15-04-2023ರವರೆಗೆ ನಡೆಯಲಿದೆ.
BREAKING NEWS : ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್ ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್ |Roshan baig
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ( SSLC Mains Exam 2023 ) ದಿನಾಂಕ 01-04-2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ 29-10-2022 ರಿಂದ 28-11-2022ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ವಿದ್ಯಾರ್ಥಿ ನಿಲಯ ಕಾಮಗಾರಿ ಆರಂಭ – ಸಿಎಂ ಬೊಮ್ಮಾಯಿ
ಹೀಗಿದೆ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
- ದಿನಾಂಕ 01-04-2023, ಶನಿವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
- ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
- ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
- ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
- ದಿನಾಂಕ 10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
- ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
- ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.
ವರದಿ: ವಸಂತ ಬಿ ಈಶ್ವರಗೆರೆ