ಬೆಂಗಳೂರು: 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ 25-02-2025ರಿಂದ 04-03-2025ರವರೆಗೆ ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ರಿಂದ ಪಡೆದುಕೊಂಡು, ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಸೂಚಿಸಿದ್ದಾರೆ.
ಹೀಗಿದೆ SSLC ಪೂರ್ವ ಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ