ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್.16, 2024ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆ ನಡೆದು, ಫಲಿತಾಂಶ ಪ್ರಕಟಿಸುವುದಾಗಿ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ಎ.ಹನುಮರಸಯ್ಯ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ಸಂಘದ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಈ ಕೆಳಕಂಡಂತೆ ಚುನಾವಣಾ ವೇಳಾಪಟ್ಟಿಯಂತೆ ನಡೆಸುವುದಾಗಿ ತಿಳಿಸಿದ್ದಾರೆ.
ಹೀಗಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ವೇಳಾಪಟ್ಟಿ
- ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 09-10-2024ರಿಂದ ದಿನಾಂಕ 28-10-2024ರವರೆಗೆ ಚುನಾವಣೆ ನಡೆಯಲಿದೆ.
- ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ದಿನಾಂಕ 30-10-2024ರಿಂದ 16-11-2024ರವರೆಗೆ ಚುನಾವಣೆ ನಡೆಯಲಿದೆ.
- ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ದಿನಾಂಕ 19-11-2024 ರಿಂದ 04-12-2024ರವರೆಗೆ ನಡೆಯಲಿದೆ.
- ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತಕ್ಷೇತ್ರವಾರು ಸ್ಥಾನಗಳಿಗೆ ದಿನಾಂಕ 17-09-2024ರಿಂದ ದಿನಾಂಕ 04-12-2024ರವರೆಗೆ ಚುನಾವಣೆ ನಡೆಸಲು ನಿಗದಿ ಪಡಿಸಲಾಗಿದೆ.
- ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಗಳು ದಿನಾಂಕ 09-12-2024ರಿಂದ 27-12-2024ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ.
ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ
- ನಾಮಪತ್ರ ಸಲ್ಲಿಕೆ ದಿನಾಂಕ 09-10-2024ರಿಂದ ಆರಂಭಗೊಳ್ಳಲಿದೆ.
- ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 18-10-2024
- ನಾಮಪತ್ರ ಪರಿಶೀಲನೆ ದಿನಾಂಕ 19-10-2024ರಂದು ನಡೆಯಲಿದೆ.
- ಅರ್ಹ ಅಭ್ಯರ್ಥಿಗಳ ಹೆಸರನ್ನು ದಿನಾಂಕ 19-10-2024ರಂದು ಪ್ರಕಟಿಸಲಾಗುತ್ತದೆ.
- ಉಮೇದುವಾರಿಕೆ ಹಿಂಪಡೆಯಲು ದಿನಾಂಕ 21-10-2024 ಕೊನೆಯ ದಿನವಾಗಿದೆ.
- ಅಂತಿಮ ಕಣದಲ್ಲಿನ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 21-10-2024ರ ಸಂಜೆ 5.30ಕ್ಕೆ ಪ್ರಕಟ
- ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ದಿನಾಂಕ 28-10-2024ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
- ದಿನಾಂಕ 28-10-2024ರಂದು ಸಂಜೆ ಮತದಾನ ಮುಕ್ತಾಯದ ನಂತ್ರ ಮತಏಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.
ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಚುನಾವಣಾ ವೇಳಾಪಟ್ಟಿ
- ದಿನಾಂಕ 31-10-2024ರಿಂದ ನಾಮಪತ್ರ ಸಲ್ಲಿಕೆ ಆರಂಭ
- ದಿನಾಂಕ 07-11-2024ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ
- ದಿನಾಂಕ 08-11-2024ರಂದು ನಾಮಪತ್ರಗಳ ಪರಿಶೀಲನೆ
- ದಿನಾಂಕ 08-11-2024ರಂದು ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟ
- ದಿನಾಂಕ 11-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ
- ದಿನಾಂಕ 16-11-2024ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ
- ದಿನಾಂಕ 16-11-2024ರಂದು ಮತದಾನ ಮುಕ್ತಾಯದ ನಂತ್ರ ಮತಏಣಿಕೆ, ಫಲಿತಾಂಶ ಪ್ರಕಟ
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ಡೈಮಂಡ್ ಲೀಗ್ ಫೈನಲ್’ನಲ್ಲಿ ‘ಕೈ ಮುರಿತ’ದೊಂದಿಗೆ ಸ್ಪರ್ಧಿಸಿದ್ದಾಗಿ ‘ನೀರಜ್ ಚೋಪ್ರಾ’ ಬಹಿರಂಗ | Neeraj Chopra
ಅರವಿಂದ್ ಕೇಜ್ರಿವಾಲ್ ರಾಜೀನಾಮೆ: ಇಲ್ಲಿದೆ ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ