ಸುಭಾಷಿತ :

Monday, March 30 , 2020 12:18 PM

ಕೊರೊನಾ ಭೀತಿ : ವಿಕ್ಟೋರಿಯಾ ಬಳಿಕ ಬೌರಿಂಗ್ ಆಸ್ಪತ್ರೆ ಕೋವಿಡ್-19 ಚಿಕಿತ್ಸೆಗೆ ಮೀಸಲಿಡಲು ಸರ್ಕಾರದಿಂದ ನಿರ್ಧಾರ


Thursday, March 26th, 2020 7:59 pm

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡಲು ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಟ್ಟಿದ್ದು, ಇದೀಗ ಸೋಂಕಿತರ ಚಿಕಿತ್ಸೆಗೆ ಬೌರಿಂಗ್ ಆಸ್ಪತ್ರೆಯನ್ನು ಮೀಸಲಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಶಿವಾಜಿನಗರದ ಲೇಡಿ ಕರ್ಜನ್‌ ರಸ್ತೆಯಲ್ಲಿರುವ 1884ರಲ್ಲಿ ಸ್ಥಾಪನೆಯಾದ ಐತಿಹಾಸಿಕ ‘ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ’ಯನ್ನು ಕೋವಿಡ್‌-19 ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡುವ ತೀರ್ಮಾನವನ್ನು ರಾಜ್ಯ ಸರಕಾರ ಕೈಗೊಂಡಿದೆ. ಹೀಗಾಗಿ ಆಸ್ಪತ್ರೆಯಲ್ಲಿರುವ ಎಲ್ಲಾ ಹೊರ ರೋಗಿ ವಿಭಾಗ ಮತ್ತು ಒಳ ರೋಗಿ ವಿಭಾಗವನ್ನು ಮುಚ್ಚಲಾಗುತ್ತದೆ. ಕೊರೊನಾ ವೈರಾಣು ಸೋಂಕಿತರಲ್ಲದೆ ಬೇರೆ ಯಾರನ್ನೂ ಆಸ್ಪತ್ರೆಗೆ ಒಳರೋಗಿಯಾಗಿ ಸೇರಿಸಿಕೊಳ್ಳದಿರಲು ನಿರ್ಧರಿಸಲಾಗಿದೆ..

ಈಗಾಗಲೇ  ಕೆ.ಆರ್. ಮಾರುಕಟ್ಟೆ ಸಮೀಪದಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೊನಾ ವೈರಸ್‌ ಸೋಂಕಿತರಿಗೆ ಮೀಸಲಾಗಿಡಲು ಸರ್ಕಾರ ತೀರ್ಮಾನಿಸಿತ್ತು. ದಕ್ಷಿಣ ಕನ್ನಡದ ಮಂಗಳೂರಿನಲ್ಲಿರುವ ವೆನ್ಲಾಕ್‌ ಆಸ್ಪತ್ರೆಯನ್ನೂ ಕೊರೊನಾ ಸೋಂಕಿತರಿಗಾಗಿಯೇ ಮೀಸಲಿಡಲು ನಿರ್ಧರಿಸಲಾಗಿದೆ.  ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯನ್ನು ಇದೇ ಉದ್ದೇಶಕ್ಕೆ ಮೀಸಲಿಡಲು ತೀರ್ಮಾನಿಸಲಾಗಿದೆ….

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions