ಭೋಪಾಲ್ : ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡುವುದಾಗಿ ಗಣಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.
ಇಂದು 2 ನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2022-23 ನೇ ಸಾಲಿನ ಖನಿಜ ಬ್ಲಾಕಗಳ ಹರಾಜಿನಲ್ಲಿ 3 ನೇ ಬಹುಮಾನ ಪಡೆದುಕೊಂಡು ಉತ್ತಮ ಸಾಧನೆಯನ್ನು ಮಾಡಿದೆ. ಕೇಂದ್ರ ಸರ್ಕಾರದಿಂದ ಶ್ಲಾಘನೆ ದೊರೆತಿದೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸಾಧನೆ ತೋರಿಸುವುದಾಗಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ ಜಿ ಸಂಸದೀಯ ವ್ಯವಹಾರಗಳ ಗಣಿ ಮತ್ತು ಕಲ್ಲಿದ್ದಲು ಕೇಂದ್ರ ಸಚಿವರು ಮೋಹನ್ ಯಾದವ್ ಜಿ ಮಧ್ಯಪ್ರದೇಶದ ಮುಖ್ಯಮಂತ್ರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೇಂದ್ರದ ಹಿರಿಯ ಅಧಿಕಾರಿಗಳು ಹಾಗೂ ಮಧ್ಯಪ್ರದೇಶದ ಹಿರಿಯ ಅಧಿಕಾರಿಗಳು ಮತ್ತು ಗಿರೀಶ್ ಐಎಎಸ್ ನಿರ್ದೇಶಕರು ಉಪಸ್ಥಿತರಿದ್ದರು.