ಬೆಂಗಳುರು : ಹೊಸ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಶೀಘ್ರವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

BIGG NEWS : ಉಪ್ಪಿನಂಗಡಿಯಲ್ಲಿ ಕುದುರೆಗೆ ಸರ್ಕಾರಿ ಬಸ್‌ ಡಿಕ್ಕಿ, ಸ್ಥಳದಲ್ಲೇ ಸಾವು : ಸವಾರನಿಗೆ ಗಂಭೀರ ಗಾಯ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುತ್ತಿದ್ದು, ಯಾವ್ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇನೆ. ಅಭ್ಯರ್ಥಿಗಳು, ಪ್ರಣಾಳಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನ ತಮ್ಮ ಪಾರಿಜಾತ ನಿವಾಸದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ ಅವರು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ವನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಬಿಜೆಪಿಗೆ ಯಾವುದೇ ಕಾರಣಕ್ಕೂ ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವ ಯಾವ ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸುತ್ತೇನೆ ಎಂದರು.

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

Share.
Exit mobile version