ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಶಾಸಕ ಎಸ್ ಆರ್ ಶ್ರೀನಿವಾಸ (ವಾಸು) ಅವರನ್ನು ನೇಮಕ ಮಾಡಿ ಆದೇಶಿಸಿತ್ತು. ಅದರಂತೆ ಇಂದು ಅವರು ನಿಗಮದ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ತುಮಕೂರಿನ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಅವರನ್ನು ಕೆ ಎಸ್ ಆರ್ ಟಿಸಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇಂತಹ ಅವರು ಇಂದು ನಿಗಮದ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದರು.
ಅಧಿಕಾರ ಸ್ವೀಕರಾದ ಬಳಿಕ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ ಅಧ್ಯಕ್ಷರಿಗೆ ಹೂ ಗುಚ್ಚ ನೀಡಿ ಶುಭ ಹಾರೈಸಿದರು. ಅಲ್ಲದೇ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿ. ಅನ್ಬುಕುಮಾರ್ ಭಾ.ಆ.ಸೇ. ವ್ಯವಸ್ಥಾಪಕ ನಿರ್ದೇಶಕರು, ಡಾ. ನಂದಿನಿದೇವಿ ಕೆ, ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ರವರು ಮಾನ್ಯ ಅಧ್ಯಕ್ಷರಿಗೆ ಶುಭ ಕೋರಿದರು.
ಇದು ಅಂಚೆ ಕಚೇರಿಯ ಅದ್ಭುತ ಯೋಜನೆ: ನೀವು ತುಂಬಾ ಬಡ್ಡಿಯನ್ನು ಪಡೆಯುತ್ತೀರಿ