ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಡಿ.19ರಂದು ಅಂಗೀಕಾರ ದೊರೆಯಿತು.
ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರನ್ನಾಗಿ ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನು ಹಾಗೂ ಒಬ್ಬ ಮಹಿಳೆಯನ್ನು ನಾಮನಿರ್ದೇಶಿಸಲು ಮತ್ತು ಸರ್ಕಾರದಿಂದ ಹೊಸ ದತ್ತಾಂಶ ಅಥವಾ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ಅನುಸೂಚಿತ ಜಾತಿಗಳ ಸದಸ್ಯರಿಗೆ ಉಪ-ವರ್ಗೀಕರಣದ ಶೇಕಡವಾರು ಮೀಸಲಾತಿಯಲ್ಲಿ ಅಗತ್ಯ ಮಾರ್ಪಾಡನ್ನು ಮಾಡಲು ಶಿಫಾರಸ್ಸು ಮಾಡುವಂತೆ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರವನ್ನು ನೀಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ, 2002 (2002ರ ಕರ್ನಾಟಕ ಅಧಿನಿಯಮ 20)ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಸದನಕ್ಕೆ ತಿಳಿಸಿದರು.
ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.








