Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ಲಾಮಾಬಾದ್ ಆತ್ಮಹತ್ಯಾ ಬಾಂಬರ್ ಗುರುತು ಪತ್ತೆ: ಪೇಶಾವರ ಮೂಲದ ಉಗ್ರನಿಗೆ ಅಫ್ಘಾನಿಸ್ತಾನದಲ್ಲಿ ಸಿಕ್ಕಿತ್ತು ತರಬೇತಿ!

07/02/2026 12:08 PM

ಗಮನಿಸಿ : ಉತ್ತಮ ಆರೋಗ್ಯಕ್ಕಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರು ತೆಗೆದುಕೊಳ್ಳಬೇಕಾದ ಪೂರಕಗಳು ಇವು.!

07/02/2026 12:02 PM

ನಿಮ್ಮ ಫೋನ್ ನಂಬರ್ ನೀಡದೆ ವಾಟ್ಸಾಪ್ ಬಳಸುವುದು ಹೇಗೆ? ಯಾರಿಗೂ ತಿಳಿಯದ ಸೀಕ್ರೆಟ್ ಟ್ರಿಕ್ ಇಲ್ಲಿದೆ!

07/02/2026 11:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ ಸಿದ್ದರಾಮಯ್ಯ
KARNATAKA

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ ಸಿದ್ದರಾಮಯ್ಯ

By kannadanewsnow0920/11/2024 2:23 PM

ಬೆಂಗಳೂರು : ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

ಕೈಗಾರಿಕಾ ಅಭಿವೃದ್ಧಿಯ ಜತೆಯಲ್ಲೇ ಪರಿಸರ ಸಂರಕ್ಷಣೆ ಮತ್ತು ಎಲ್ಲರನ್ನೂ ಒಳಗೊಂಡಿರುವ ಬೆಳವಣಿಗೆಗಳ ಜತೆಗೆ ಸಮತೋಲನ ಸಾಧಿಸುವ ಸವಾಲು ನಮ್ಮ ಮುಂದಿದೆ. ಮೆಟಲ್ಸ್ (ಲೋಹಗಳು) ಮತ್ತು ಮೆಟಿರೀಯಲ್ಸ್ ವಲಯಗಳಲ್ಲಿ ಇವೆಲ್ಲವನ್ನೂ ಸಾಧ್ಯವಾಗಿಸುವಂತಹ ಸಂಶೋಧನೆ ಮತ್ತು ನಾವೀನ್ಯತಾ ಉಪಕ್ರಮಗಳಿಗೆ ಸರಕಾರವು ಒತ್ತು ನೀಡುತ್ತಿದೆ ಎಂದು ಅವರು ನುಡಿದಿದ್ದಾರೆ.

ಮೆಟಲ್ಸ್ ಮತ್ತು ಮೆಟೀರಿಯಲ್ಸ್ ಕ್ಷೇತ್ರವೂ ಸೇರಿದಂತೆ ಎಲ್ಲ ವಲಯಗಳಲ್ಲೂ ಕರ್ನಾಟಕವು ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಲೋಹ ಮತ್ತು ಅದಕ್ಕೆ ಪೂರಕವಾದ ವಲಯಗಳು ಆರ್ಥಿಕ ಅಭಿವೃದ್ಧಿಯ ಆಚೆಗೂ ತಮ್ಮ ಪ್ರಭಾವ ಬೀರುತ್ತವೆ. ಕ್ಷಿಪ್ರವಾಗಿ ಬೆಳವಣಿಗೆ ಕಾಣುತ್ತಿರುವ ಜಗತ್ತಿನಲ್ಲಿ ಉದ್ಭವಿಸುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಉದ್ಯಮಿಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ರಾಜ್ಯ ಸರಕಾರವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೆ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುಚ್ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಸಜ್ಜುಗೊಳಿಸಲಾಗುವುದು’ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ಧಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು ಹೊಸ ಬಗೆಯ ಶಕ್ತಿಸಾಮರ್ಥ್ಯಗಳನ್ನು ತಂದುಕೊಟ್ಟಿವೆ. ಸುಧಾರಿತ ಅಲಾಯ್ಸ್, ಅತ್ಯಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಈ ವಲಯದಲ್ಲಿ ರಾಜ್ಯದ ಹಲವು ನವೋದ್ಯಮಗಳು ಆಟೋಮೋಟೀವ್, ವೈಮಾಂತರಿಕ್ಷ, ಹಗುರ ಅಲಾಯ್ ಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿವೆ ಎಂದರು.

ರಾಜ್ಯವು ಹೆವಿ ಎಂಜಿನಿಯರಿಂಗ್, ವಿದ್ಯುತ್ ಉತ್ಪಾದನೆ ಮತ್ತು ಸ್ಪೆಷಲ್ ಪರ್ಪಸ್ ಮಷಿನರಿ ಕ್ಷೇತ್ರಗಳ ತಾಣವಾಗಿದೆ. ಮಶೀನ್ ಟೂಲ್ ತಯಾರಿಕೆಯಲ್ಲಿ ದೇಶದ ಒಟ್ಟು ಉತ್ಪಾದನೆಯಲ್ಲಿ ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಈ ಮೂಲಕ ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಏಕಕಾಲಕ್ಕೆ ಪೂರೈಸಲಾಗುತ್ತಿದೆ. ಲೋಹ ಮತ್ತು ಮೆಟೀರಿಯಲ್ಸ್ ವಲಯಗಳ ಬೇಡಿಕೆಗಳನ್ನು ಸರಕಾರವು ಸಕಾರಾತ್ಮಕವಾಗಿ ಪರಿಗಣಿಸಿ, ಎಲ್ಲ ಬಗೆಯ ಪ್ರೋತ್ಸಾಹಗಳನ್ನೂ ಕೊಡಲಿದೆ ಎಂದು ಅವರು ಭರವಸೆ ನೀಡಿದರು.

ಐಐಎಂ ಅಧ್ಯಕ್ಷ ಸಜ್ಜನ್ ಜಿಂದಾಲ್, ಜಿಂದಾಲ್ ಅಧ್ಯಕ್ಷ ಪಿ.ಕೆ.ಮುರುಗನ್ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.

BIG NEWS : ‘BPL’ ಕಾರ್ಡ್ ರದ್ದತಿಯ ಬಗ್ಗೆ ಯಾರು ಆತಂಕ ಪಡೋದು ಬೇಡ : ಡಿಸಿಎಂ ಡಿಕೆ ಶಿವಕುಮಾರ್

BREAKING : ಬೆಳಗಾವಿಯಲ್ಲಿ ಭೀಕರ ಕೊಲೆ : ಪತಿಯ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರ ಬಂಧನ!

Share. Facebook Twitter LinkedIn WhatsApp Email

Related Posts

ಗಮನಿಸಿ : ಉತ್ತಮ ಆರೋಗ್ಯಕ್ಕಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರು ತೆಗೆದುಕೊಳ್ಳಬೇಕಾದ ಪೂರಕಗಳು ಇವು.!

07/02/2026 12:02 PM1 Min Read

BREAKING : ಮಾಜಿ ಶಾಸಕ `ಯಜಮಾನ್ ಮೋತಿ ವೀರಣ್ಣ’ ನಿಧನ | Moti Veeranna passes away

07/02/2026 11:47 AM1 Min Read

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರ ತಲೆಯ ಮೇಲೆ ಹರಿದು ಯುವತಿ ಸಾವು!

07/02/2026 11:26 AM1 Min Read
Recent News

ಇಸ್ಲಾಮಾಬಾದ್ ಆತ್ಮಹತ್ಯಾ ಬಾಂಬರ್ ಗುರುತು ಪತ್ತೆ: ಪೇಶಾವರ ಮೂಲದ ಉಗ್ರನಿಗೆ ಅಫ್ಘಾನಿಸ್ತಾನದಲ್ಲಿ ಸಿಕ್ಕಿತ್ತು ತರಬೇತಿ!

07/02/2026 12:08 PM

ಗಮನಿಸಿ : ಉತ್ತಮ ಆರೋಗ್ಯಕ್ಕಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರು ತೆಗೆದುಕೊಳ್ಳಬೇಕಾದ ಪೂರಕಗಳು ಇವು.!

07/02/2026 12:02 PM

ನಿಮ್ಮ ಫೋನ್ ನಂಬರ್ ನೀಡದೆ ವಾಟ್ಸಾಪ್ ಬಳಸುವುದು ಹೇಗೆ? ಯಾರಿಗೂ ತಿಳಿಯದ ಸೀಕ್ರೆಟ್ ಟ್ರಿಕ್ ಇಲ್ಲಿದೆ!

07/02/2026 11:55 AM

BREAKING : ಮಾಜಿ ಶಾಸಕ `ಯಜಮಾನ್ ಮೋತಿ ವೀರಣ್ಣ’ ನಿಧನ | Moti Veeranna passes away

07/02/2026 11:47 AM
State News
KARNATAKA

ಗಮನಿಸಿ : ಉತ್ತಮ ಆರೋಗ್ಯಕ್ಕಾಗಿ 40 ವರ್ಷಕ್ಕಿಂತ ಮೇಲ್ಪಟ್ಟವರು ತೆಗೆದುಕೊಳ್ಳಬೇಕಾದ ಪೂರಕಗಳು ಇವು.!

By kannadanewsnow5707/02/2026 12:02 PM KARNATAKA 1 Min Read

40 ವರ್ಷ ವಯಸ್ಸಿನ ನಂತರ, ನಮ್ಮ ದೇಹದ ಚಯಾಪಚಯ ಕ್ರಿಯೆ ನಿಧಾನವಾಗುವುದಲ್ಲದೆ, ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯವೂ ಕ್ರಮೇಣ ಕಡಿಮೆಯಾಗುತ್ತದೆ. ಈ ವಯಸ್ಸಿನಲ್ಲಿ, ಆಹಾರದ ಮೂಲಕ ಮಾತ್ರ ಎಲ್ಲಾ ಪೋಷಕಾಂಶಗಳನ್ನು ಪಡೆಯುವುದು ಕಷ್ಟಕರವಾಗಿರುತ್ತದೆ, ಅದಕ್ಕಾಗಿಯೇ ವೈದ್ಯರ ಸಲಹೆಯೊಂದಿಗೆ ಕೆಲವು ಪ್ರಮುಖ ಪೂರಕಗಳನ್ನು ತೆಗೆದುಕೊಳ್ಳುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಮೂಳೆಯ ಬಲಕ್ಕೆ ವಿಶೇಷವಾಗಿ ನಿರ್ಣಾಯಕವಾಗಿವೆ. 40 ವರ್ಷಗಳ ನಂತರ, ಮಹಿಳೆಯರು ಹಾರ್ಮೋನುಗಳ ಬದಲಾವಣೆಗಳಿಂದಾಗಿ ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೊಂದಿರುತ್ತಾರೆ, ಇದು ಮೂಳೆ ಸಾಂದ್ರತೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ, ಆದ್ದರಿಂದ ಈ ಎರಡು ಪೂರಕಗಳು ಮೂಳೆಗಳನ್ನು ಬಲವಾಗಿಡುವುದಲ್ಲದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಒಮೆಗಾ -3 ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯ ಮತ್ತು ಮೆದುಳಿನ ಕಾರ್ಯವನ್ನು ಸುಧಾರಿಸಲು ಅದ್ಭುತಗಳನ್ನು ಮಾಡುತ್ತವೆ. ಅವು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಅಲ್ಲದೆ, ರಕ್ತಹೀನತೆಯನ್ನು ತಡೆಗಟ್ಟಲು ಮತ್ತು ನರಮಂಡಲವು ಸಕ್ರಿಯವಾಗಿ ಕಾರ್ಯನಿರ್ವಹಿಸಲು ವಿಟಮಿನ್ ಬಿ 12 ಅತ್ಯಗತ್ಯ. ನಾವು ವಯಸ್ಸಾದಂತೆ, ಜೀರ್ಣಾಂಗ ವ್ಯವಸ್ಥೆಯು ಈ ವಿಟಮಿನ್ ಅನ್ನು ಹೀರಿಕೊಳ್ಳುವಲ್ಲಿ ತೊಂದರೆ ಅನುಭವಿಸುತ್ತದೆ, ಆದ್ದರಿಂದ ಇದನ್ನು ಪೂರಕ ರೂಪದಲ್ಲಿ ತೆಗೆದುಕೊಳ್ಳುವುದರಿಂದ ಆಯಾಸ ಕಡಿಮೆಯಾಗುತ್ತದೆ ಮಾತ್ರವಲ್ಲದೆ ಸ್ಮರಣೆಯನ್ನು ಸುಧಾರಿಸುತ್ತದೆ. ಸ್ನಾಯು ಕ್ಷೀಣತೆ ಮತ್ತು ಕೋಶಗಳ ಪುನರುತ್ಪಾದನೆಯನ್ನು ತಡೆಗಟ್ಟಲು ಮೆಗ್ನೀಸಿಯಮ್ ಮತ್ತೊಂದು ಪ್ರಮುಖ ಪೋಷಕಾಂಶವಾಗಿದೆ. ಇದು ಸ್ನಾಯು ನೋವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಅಲ್ಲದೆ, ದೃಷ್ಟಿ ರಕ್ಷಿಸಲು ಮತ್ತು ಚರ್ಮದ ಹಾನಿಯನ್ನು ತಡೆಯಲು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಮಲ್ಟಿವಿಟಮಿನ್‌ಗಳನ್ನು ಆರಿಸಿ. ಆದಾಗ್ಯೂ, ಯಾವುದೇ ಪೂರಕವನ್ನು ತೆಗೆದುಕೊಳ್ಳುವ ಮೊದಲು, ನಿಮ್ಮ ರಕ್ತ ಪರೀಕ್ಷೆಯ ವರದಿಯ ಆಧಾರದ ಮೇಲೆ ವೈದ್ಯರು ಸೂಚಿಸಿದ ಪ್ರಮಾಣದಲ್ಲಿ ಅದನ್ನು ಬಳಸುವುದು ಸೂಕ್ತವಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ಪೂರಕಗಳನ್ನು ತೆಗೆದುಕೊಳ್ಳುವ ಮೂಲಕ, ನೀವು 40 ವರ್ಷಗಳ ನಂತರವೂ ಯುವಕರಾಗಿ ಮತ್ತು ಚೈತನ್ಯಶೀಲರಾಗಿ ಉಳಿಯಬಹುದು.

BREAKING : ಮಾಜಿ ಶಾಸಕ `ಯಜಮಾನ್ ಮೋತಿ ವೀರಣ್ಣ’ ನಿಧನ | Moti Veeranna passes away

07/02/2026 11:47 AM

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರ ತಲೆಯ ಮೇಲೆ ಹರಿದು ಯುವತಿ ಸಾವು!

07/02/2026 11:26 AM

BREAKING : ಮೈಸೂರಲ್ಲಿ ಭೀಕರ ಅಪಘಾತ : ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

07/02/2026 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.