ಶಿವಮೊಗ್ಗ : ಕರ್ನಾಟಕದಲ್ಲೂ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರುವ ಸಂಬಂಧ ರಾಜ್ಯ ಸರ್ಕಾರ ಶೀಘ್ರವೇ ದೃಢ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIGG NEWS : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ‘ಅಂತಿಮ ಕೀ ಉತ್ತರ’ ಪ್ರಕಟ | KARTET-2022
ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ರಾಜ್ಯ ಬಿಜೆಪಿ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದೇಶದಲ್ಲಿ ಇದೀಗ ಏಕರೂಪ ನಾಗರಿಕ ಸಂಹಿತೆ ಕುರಿತು ಚರ್ಚೆಯಾಗುತ್ತಿದೆ. ನಮ್ಮ ಸರ್ಕಾರ ಕೂಡ ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಂಬಂಧ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಎಲ್ಲ ಜನರಿಗೆ ಅನ್ವಯ ಆಗುವ ಸಾಮಾನ್ಯ ನಿಯಮ ಮತ್ತು ಕಾನೂನು ಜಾರಿಗೊಳಿಸುವ ವಿಷಯದಲ್ಲಿ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ. ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.