ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.
ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ತೇವಾಂಶ ಹೆಚ್ಚಿರುವುದರಿಂದ ಚಳಿ ಹೆಚ್ಚಾಗಿದೆ.