ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಕರಾವಳಿಯಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 45-55 ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
BIGG NEWS : ರಾಜ್ಯದಲ್ಲಿ ಹೊಸ ಕೃಷಿ ನೀತಿಗೆ ಜಾರಿಗೆ ಚಿಂತನೆ : ಸಿಎಂ ಬೊಮ್ಮಾಯಿ
ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮಳೆ ಇರಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋಅಲರ್ಟ್ ಘೋಷಿಸಲಾಗಿದೆ.
Breaking news: ಉತ್ತರ ಗ್ರೀಸ್ನಲ್ಲಿ ಅಪಾಯಕಾರಿ ಸರಕು ಸಾಗಿಸುತ್ತಿದ್ದ ವಿಮಾನ ಪತನ… ವಿಡಿಯೋ