ಬೆಂಗಳೂರು : ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಇಂದು ಮತ್ತು ನಾಳೆ ರಾಜ್ಯದ ಹಲವು ಕಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹವಾಮಾನ ಇಲಾಖೆ ಪ್ರಕಾರ ಇಂದು ಸಂಜೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿದೆ. ಹಾಗೂ ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಶಿಯಸ್ ಇರಲಿದೆ. ಕನಿಷ್ಟ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.