ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಗ್ರಾಮ ಒನ್ ಕೇಂದ್ರದಿಂದ ಗ್ರಾಮೀಣರ ಬದುಕು ಹಸನು : ಸಚಿವ ಬೈರತಿ ಬಸವರಾಜ್
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕನ್ಯಾಕುಮಾರಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಇಂದು ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ರಾಜ್ಯದ ಚಾಮರಾಜನಗರ, ಕೋಲಾರ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಶನಿವಾರದವರೆಗೆ ರಾಜ್ಯಾದ್ಯಂತ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.