ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದಿಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; … Continue reading ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ