ಬೆಂಗಳೂರು : ರಾಜ್ಯ ಸರ್ಕಾರ ವಿಜಾಬ್ ನಿಷೇಧ ಆದೇಶವನ್ನು ಪಡೆದಿದ್ದು ಇನ್ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜನಿವಾರ, ರುದ್ರಾಕ್ಷಿ, ಶಿವದಾರ ಹಾಗೂ ಇಜಾಬ್ ಧರಿಸಿ ಹೋಗಬಹುದು ಎಂದು ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಟ್ವೀಟ್ ನಲ್ಲಿ ಈ ಕುರಿತು ಹೇಳಿದ ಅವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಬಾಕಿ ಇರುವಾಗಲೇ, ನ್ಯಾಯಾಂಗದ ಪ್ರಕ್ರಿಯೆಯನ್ನು ಕಡೆಗಣಿಸಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆದಿರುವುದು ನ್ಯಾಯಾಂಗ ವ್ಯವಸ್ಥೆಗೆ ಮಾಡುವ ಅಪಮಾನ.
ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯ ಮೂಲ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ಸಮಾನತೆ ಬೆಳೆಸುವುದು. ಆದರೆ ಕಾಂಗ್ರೆಸ್ ಸರ್ಕಾರವೇ ಈ ರೀತಿ ಧರ್ಮದ ಆಧಾರದ ಮೇಲೆ ತಾರತಮ್ಯ ಎಸಗುತ್ತಿರುವುದು ಖಂಡನೀಯ. ದೇಶದೆಲ್ಲೆಡೆ ಏಕರೂಪ ನಾಗರಿಕ ಸಂಹಿತೆ ಜಾರಿ ತರುತ್ತಿರುವ ಈ ಬೆನ್ನಲ್ಲೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ. ಕೇಸರಿ ಶಾಲು ಧಾರ್ಮಿಕವಲ್ಲ, ಯಾವ ಬಣ್ಣಗಳ ಹಾಕಬೇಕು, ಹಾಕಬಾರದು ಎಂದು ಹಕ್ಕನ್ನು ಕಸಿದುಕೊಳ್ಳುವ ಸರ್ವಾಧಿಕಾರದ ಧೋರಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರದರ್ಶಿಸುತ್ತಿದೆ.
ಒಂದು ನಿರ್ದಿಷ್ಟ ವರ್ಗವನ್ನು ಓಲೈಸಲು ಹೋಗಿ ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಲಾಗುತ್ತಿದೆ. ‘ವಿಭಜಕ ನೀತಿ’ಯನ್ನು ಅಳವಡಿಸಿಕೊಂಡು ಶಾಲಾ ಶಿಸ್ತನ್ನು ಹದಗೆಡಿಸುವ ಹುನ್ನಾರಕ್ಕೆ ಸರ್ಕಾರ ಮುಂದಾಗಿರುವುದು ನಿಜಕ್ಕೂ ಶೋಚನೀಯ ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣ ಶಿಕ್ಷಣದ ಅಂಗಳಕ್ಕೂ ಕಾಲಿಟ್ಟಿರುವುದು ಅತ್ಯಂತ ದುರದೃಷ್ಟಕರ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದೆ ಬಾಕಿ ಇರುವಾಗಲೇ, ನ್ಯಾಯಾಂಗದ ಪ್ರಕ್ರಿಯೆಯನ್ನು ಕಡೆಗಣಿಸಿ ಹಿಜಾಬ್ ನಿಷೇಧವನ್ನು ಸರ್ಕಾರ ಹಿಂಪಡೆದಿರುವುದು ನ್ಯಾಯಾಂಗ…
— Pralhad Joshi (@JoshiPralhad) May 14, 2026








