ಬೆಂಗಳೂರು: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಆಯ-ವ್ಯಯ, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಾಗ್ಧಾಳಿ ನಡೆಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೇಶದ ದಕ್ಷಿಣ ಭಾಗದ ರಾಜ್ಯಗಳ ಜನರ ತೆರಿಗೆಯ ಸಂಪತ್ತನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಸುರಿಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ನೀರಾವರಿ ಯೋಜನೆಗಳನ್ನು, ರೈತರ ಆದಾಯ ಹೆಚ್ಚಿಸುವಂಥ ಬಲಿಷ್ಟವಾದ ಯೋಜನೆಗಳನ್ನು ರೂಪಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆಗೆ ಪರಿಹಾರಗಳಿಲ್ಲ ಎಂದಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ಮೂವರು ಸಚಿವರಿದ್ದರು, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದಲ್ಲಿನ ಮಹಾನಗರಗಳ ಸುರಕ್ಷತೆಗೆ ಮತ್ತು ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ನೀಡುವ ನಿರೀಕ್ಷೆಯು ಹುಸಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಜನತೆಗೆ ಬಜೆಟ್‌ನಲ್ಲಿ ಮತ್ತೊಮ್ಮೆ ಮೋಸ ಮಾಡಿದೆ ಎಂಬುದಾಗಿ ಕಿಡಿಕಾರಿದ್ದಾರೆ.
ಬಂಡವಾಳ ವೆಚ್ಚದ ಮೇಲಿನ ಸಾರ್ವಜನಿಕ ವೆಚ್ಚದಲ್ಲಿ ಯಾವುದೇ ಕಡಿತವಿಲ್ಲ: ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab