ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಬಹುದೊಡ್ಡ ಬೆಳವಣಿಗೆ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀವ್ ನಾಮಿ ನೀಡಲಿದ್ದಾರೆ ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ, ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಹಿಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ರಾಜಿನಾಮೆ ನೀಡುತ್ತೇನೆಂದು ಘೋಷಿಸಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಸಹ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ರಾಜಕೀಯದಲ್ಲಿ ನಡೆದು ಬಂದು ಹಾದಿಯ ಕುರಿತು ತಿಳಿಯೋಣ.
ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಹೆಜ್ಜೆ ಗುರುತು!
ಸಿಎಂ ಸಿದ್ದರಾಮಯ್ಯ ಅವರ ಸುಮಾರು 5 ದಶಕಗಳ ಕಾಲ ರಾಜಕೀಯ ಪಯಣ, 1978 ರಲ್ಲಿ ಮೈಸೂರು ತಾಲೂಕು ಬೋರ್ಡ್ ಸದಸ್ಯರ ಮೂಲಕ ರಾಜಕೀಯಕ್ಕೆ ಎಂಟ್ರಿ ಆಗುತ್ತಾರೆ, 1983 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಎಂಟ್ರಿ ಆಗುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ 1983 ರಲ್ಲಿ ಮೊದಲ ಗೆಲುವು ಸಾಧಿಸುತ್ತಾರೆ. ಲೋಕದಳ ಪಕ್ಷದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾರೆ. ಪ್ರೊ. ನಂಜುಂಡಸ್ವಾಮಿ ಪ್ರಭಾವದಿಂದ ಸಿಎಂ ಸಿದ್ದರಾಮಯ್ಯ ರಾಜಕೀಯಕ್ಕೆ ಬರುತ್ತಾರೆ. ವಕೀಲಿ ವೃತ್ತಿ ಬಿಟ್ಟು ರಾಜಕೀಯ ಪ್ರವೇಶಿಸಿದ್ದರು. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾಗಿದ್ದರು.
ಜನತಾ ಪಕ್ಷ ಮತ್ತು ಜನತಾದಳದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದರು ರೇಷ್ಮೆ ಪಶು ಸಂಗೋಪನೆ ಮತ್ತು ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದರು. 1994 ರಲ್ಲಿ ಎಚ್ ಡಿ ದೇವೇಗೌಡರ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದರು. ಮೊದಲ ಬಾರಿಗೆ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 1996ರಲ್ಲಿ ಜೆ ಹೆಚ್ ಪಾಟೀಲ್ ಅವರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. 2004ರಲ್ಲಿ ಕಾಂಗ್ರೆಸ್ ಮತ್ತು ದಳ ಸಮ್ಮಿಶ್ರ ಸರ್ಕಾರದಲ್ಲಿ ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದರು. 2005 ರಲ್ಲಿ ಅಹಿಂದ ಚಳುವಳಿ ಸಂಘಟಿಸಿದ್ದಕ್ಕಾಗಿ ಜೆಡಿಎಸ್ ನಿಂದ ಉಚ್ಚಾಟನೆಯಾದರು.
2006 ಮತ್ತು 2013ರಲ್ಲಿ ಕಾಂಗ್ರೆಸ್ ಕೈ ಹಿಡಿದ ಸಿದ್ದರಾಮಯ್ಯ 2006ರಲ್ಲಿ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. 2006ರಲ್ಲಿ ಚಾಮುಂಡೇಶ್ವರಿಯಲ್ಲಿ 257 ಮತಗಳಿಂದ ಗೆಲುವು ಸಾಧಿಸಿದರು. 2008ರಲ್ಲಿ ವರುಣ ಕ್ಷೇತ್ರದಿಂದ ಗೆದ್ದು ವಿಪಕ್ಷ ನಾಯಕರಾದರು. 2009 ರಿಂದ 13 ರವರಿಗೆ ಈ ಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದರು. ಬಳ್ಳಾರಿಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ ಮರು ಸಂಘಟನೆ ನಡೆಸಿತು. 2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದರು. 2013 ಹದಿಮೂರರಿಂದ 2018 ರವರೆಗೆ ಸಿಎಂ ಆಗಿ ಅಧಿಕಾರ ನಿರ್ವಹಿಸಿದರು. ಮೊದಲ ಅವಧಿಯಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ಮೊದಲ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ , ಮುಂತಾದ ಜನಪರ ಯೋಜನೆಗಳನ್ನು ಜಾರಿಗೆ ತಂದರು.
ರಾಜ್ಯದಲ್ಲಿ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ ದೇವರಾಜ್ ಅರಸು ದಾಖಲೆ ಹಿಂದಿಕ್ಕಿದ ಹೆಗ್ಗಳಿಕೆ ಇವರಿಗೆ ಇದೆ ಕರ್ನಾಟಕ ಇತಿಹಾಸದಲ್ಲಿ ಅತಿ ಹೆಚ್ಚು ಭಾರಿ ಬಜೆಟ್ ಮಂಡನೆ ದಾಖಲೆ ಕೂಡ ಇವರ ಹೆಸರಲ್ಲಿದೆ ಸುಮಾರು 17 ಬಾರಿ ಬಜೆಟ್ ಮಂಡಿಸಿದ ಏಕೈಕ ನಾಯಕ ಸಿದ್ದರಾಮಯ್ಯ. ಇದೀಗ ಹಿಂದೂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಚಿವರ ಎದುರೇ ಕಣ್ಣೀರಿಟ್ಟ ಘಟನೆ ನಡೆಯಿತು ಅದಾದ ಬಳಿಕ ಸಭೆಯ ನಂತರ ಸಚಿವ ಸಂತೋಷ್ ಲಾಡ್ ಕೂಡ ಕಣ್ಣೀರು ಹಾಕಿದ್ದು ಬಹುತೇಕ ಸಚಿವರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಷಯ ತಿಳಿದು ಭಾವುಕರಾ








