Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿ ಕೆ ಸುರೇಶ್ ಮತ್ತು ಜಮೀರ್ ಅಹ್ಮದ್ ಖಾನ್ ಮಹತ್ವದ ಭೇಟಿ : ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಹೊಸ ತಲ್ಲಣ

Karnataka Cabinet Expansion and Political Developments in Bengaluru and Mysuru

ಯತೀಂದ್ರ ಸಿದ್ದರಾಮಯ್ಯರನ್ನ ಡಿಸಿಎಂ ಮಾಡಲು ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ‘ಶಕ್ತಿ ಯೋಜನೆ’ಯು ‘ವಿಶ್ವ ದಾಖಲೆ’ಗೆ ಸೇರ್ಪಡೆ: ಅತೀವ ಸಂತಸ ತಂದಿದೆ ಎಂದ ‘ಸಾರಿಗೆ ಸಚಿವ’ರು
KARNATAKA

ಕರ್ನಾಟಕದ ‘ಶಕ್ತಿ ಯೋಜನೆ’ಯು ‘ವಿಶ್ವ ದಾಖಲೆ’ಗೆ ಸೇರ್ಪಡೆ: ಅತೀವ ಸಂತಸ ತಂದಿದೆ ಎಂದ ‘ಸಾರಿಗೆ ಸಚಿವ’ರು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಶಕ್ತಿ ಯೋಜನೆಯು ( Shakti Scheme ) ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದೆ. Golden Book of World Records ನಲ್ಲಿ ದಾಖಲು ಮಾಡಿದೆ. ಇದು ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೀಡಿರುವಂತ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ( ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ ಎಂದಿದ್ದಾರೆ.

ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಬಲವಾಗಿ ನಂಬಿದ್ದವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ‌ ಹಾಗೂ ಕೆ.ಪಿ.ಸಿ.ಸಿ‌ ಅಧ್ಯಕ್ಷರಾದ ಡಿ ಕೆ‌ ಶಿವಕುಮಾರ್ ಅವರುಗಳು ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಈ‌‌ ಚಾರಿತ್ರಿಕ ಸಾಧನೆಯು ಕೆ ಎಸ್ ಆರ್ ಟಿ‌ ಸಿ, ಬಿ ಎಂ ಟಿ‌‌ ಸಿ, ವಾ‌ಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ‌ ಆಡಳಿತ ಮಂಡಳಿ, ಸಾರಿಗೆ ಸಂಸ್ಥೆಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರುಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಮರ್ಪಿಸಿದ್ದೇನೆ ಎಂದಿದ್ದಾರೆ.

ಸಮಸ್ತ ಸಿಬ್ಬಂದಿಗಳ ಪರಿಶ್ರಮ, ಕಾರ್ಯತತ್ಪರತೆ ಮತ್ತು ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ ಮುಖಂಡರುಗಳ ಸಹಕಾರವನ್ನು‌ ಮರೆಯುವಂತಿಲ್ಲ ಅವರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಶಕ್ತಿ ಯೋಜನೆಯ ಪ್ರಾರಂಭದಿಂದಲೂ ಬೆಂಬಲ,‌ಪ್ರೋತ್ಸಾಹ‌ ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಸಲಹೆ ನೀಡುತ್ತಾ ಬಂದಿರುವ ಮಾಧ್ಯಮದವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ‌ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರೆಂಟಿ ಯೋಜನೆಯಾದ ಶಕ್ತಿ‌ ಯೋಜನೆಯು‌ ಅತ್ಯಂತ ಸವಾಲಿನಿಂದ‌ ಕೂಡಿದ್ದಾಗಿತ್ತು. ಕಳೆದ ಐದಾರು ವರುಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ, ಹೊಸ‌ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ‌ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ ಎಂದಿದ್ದಾರೆ.

ಈ ಎರಡು ವರುಷಗಳ‌ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌ 5800 ಹೊಸ ಬಸ್ಸುಗಳ ಸೇರ್ಪಡೆ,10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

Beyond Free Rides- ಎಂಬ ಹೆಸರಿನಲ್ಲಿ Sustainable Mobility Network ರವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ – ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ.ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

BREAKING : ‘CM‘ ವಿರುದ್ಧ ಕೊಲೆ ಆರೋಪ : ಮಹೇಶ್ ತಿಮರೋಡಿ ವಿರುದ್ಧ `FIR’ ದಾಖಲು.!

BREAKING : ‘CM‘ ವಿರುದ್ಧ ಕೊಲೆ ಆರೋಪ : ಮಹೇಶ್ ತಿಮರೋಡಿ ವಿರುದ್ಧ `FIR’ ದಾಖಲು.!

Share. Facebook Twitter LinkedIn WhatsApp Email

Related Posts

ಡಿ ಕೆ ಸುರೇಶ್ ಮತ್ತು ಜಮೀರ್ ಅಹ್ಮದ್ ಖಾನ್ ಮಹತ್ವದ ಭೇಟಿ : ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಹೊಸ ತಲ್ಲಣ

3 Mins Read
Karnataka Cabinet Expansion and Political Developments in Bengaluru and Mysuru

ಯತೀಂದ್ರ ಸಿದ್ದರಾಮಯ್ಯರನ್ನ ಡಿಸಿಎಂ ಮಾಡಲು ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

3 Mins Read

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

1 Min Read
Recent News

ಡಿ ಕೆ ಸುರೇಶ್ ಮತ್ತು ಜಮೀರ್ ಅಹ್ಮದ್ ಖಾನ್ ಮಹತ್ವದ ಭೇಟಿ : ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಹೊಸ ತಲ್ಲಣ

Karnataka Cabinet Expansion and Political Developments in Bengaluru and Mysuru

ಯತೀಂದ್ರ ಸಿದ್ದರಾಮಯ್ಯರನ್ನ ಡಿಸಿಎಂ ಮಾಡಲು ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

MLA K. Shadakshari

ನನ್ನನ್ನು ಮಂತ್ರಿ ಮಾಡಿದ್ರೆ ಸರ್ಕಾರ ಬಿದ್ದೋಗುತ್ತಂತೆ ಕೈ ಶಾಸಕ ಕೆ. ಷಡಕ್ಷರಿ

State News
KARNATAKA

ಡಿ ಕೆ ಸುರೇಶ್ ಮತ್ತು ಜಮೀರ್ ಅಹ್ಮದ್ ಖಾನ್ ಮಹತ್ವದ ಭೇಟಿ : ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಹೊಸ ತಲ್ಲಣ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ಬೆಂಗಳೂರು :  ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಂದು ಹೊಸ ರಾಜಕೀಯ ಬೆಳವಣಿಗೆಗಳು ಮುಂಚೂಣಿಗೆ ಬರುತ್ತಿವೆ. ಸದ್ಯ ರಾಜ್ಯ ರಾಜಕಾರಣದ…

Karnataka Cabinet Expansion and Political Developments in Bengaluru and Mysuru

ಯತೀಂದ್ರ ಸಿದ್ದರಾಮಯ್ಯರನ್ನ ಡಿಸಿಎಂ ಮಾಡಲು ಮೈಸೂರಿನಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

MLA K. Shadakshari

ನನ್ನನ್ನು ಮಂತ್ರಿ ಮಾಡಿದ್ರೆ ಸರ್ಕಾರ ಬಿದ್ದೋಗುತ್ತಂತೆ ಕೈ ಶಾಸಕ ಕೆ. ಷಡಕ್ಷರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.