ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಇಂದು (ನ.30) ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿತ್ತು, ಆದರೆ ಇಂದು ವಿಚಾರಣೆ ನಡೆಯುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರತರಾಗುವುದರಿಂದ ಇಂದು ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಇಂದು ಕೂಡ ಬೆಳಗಾವಿ ಗಡಿ ವಿವಾದದ ತೀರ್ಪು ಪ್ರಕಟವಾಗುವುದಿಲ್ಲ ಎನ್ನಲಾಗಿದೆ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ನಿನ್ನೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಸಭೆ ಬಳಿಕ ಮಾತನಾಡಿದ್ದ ಅಲೋಕ್ ಕುಮಾರ್, ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಹೀಗಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್ಪೋಸ್ಟ್ ಮಾಡಿದ್ದಾರೆ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದ್ದರು.
ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್ಪಿ, ನಗರ ಪೊಲೀಸ್ ಆಯುಕ್ತ, ಡಿಸಿಪಿಗಳು, ಡಿವೈಎಸ್ಪಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ ಐಜಿಪಿ, ಕೊಲ್ಹಾಪುರ ಎಸ್ಪಿ, ಸಾಂಗ್ಲಿ ಎಸ್ಪಿ, ಸಿಂಧುದುರ್ಗ ಎಸ್ಪಿ, ಸಾವಂತವಾಡಿಯ ಡಿಎಸ್ಪಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ದೆಹಲಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದೆ. ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಿದ್ದರಾಮಯ್ಯ ಈ ಬಗ್ಗೆ ರಾಜಕೀಯ ಹೇಳಿಕೆ ನೀಡಿದ್ದಾರೆ.
ಕೆಸಿಆರ್ ಟಿಸಿ ಬಸ್ ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದ ಸಿಎಂ, ಮಹಾರಾಷ್ಟ್ರ ಗೃಹ ಇಲಾಖೆ ಜೊತೆಗೆ ನಮ್ಮ ಅಧಿಕಾರಿಗಳು ಚರ್ಚಿಸಿದ್ದಾರೆ. ಕರ್ನಾಟಕದ ಜೊತೆಗೆ ಸೇರಲು ಜತ್ ತಾಲೂಕಿನ 42 ಹಳ್ಳಿಗಳ ಒಲವು ತೋರಿವೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸೇರಲು ಕೆಲ ನಿಯಮಗಳಿವೆ. ಎಲ್ಲವನ್ನೂ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
BIGG NEWS: PFI ಬ್ಯಾನ್ ಪ್ರಶ್ನಿಸಿದ್ದ ರಿಟ್ ಅರ್ಜಿ: ಇಂದು ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
ಬೆಂಗಳೂರಿಗರೇ ಗಮನಿಸಿ : ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut