ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದಂತ 1992ರ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಹಾಗೂ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಜಾಮೀನಿನ ಬಳಿಕ ಇಂದು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
1992ರಲ್ಲಿ ನಡೆದಿದ್ದಂತ ಹುಬ್ಬಳ್ಳಿ ಗಲಭೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಆ ಬಳಿಕ ಜೈಲು ಸೇರಿದ್ದರು. ಅವರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿನ್ನೆ ನಡೆಸಿತ್ತು. ಅಲ್ಲದೇ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿತ್ತು.
ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಜೈಲಿನಿಂದ 1992ರ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಹಾಗೂ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಜೈಲಿನಿಂದ ಹೊರ ಬರುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು. ನಾನು ರಾಮ ಮಂದಿರ ಉದ್ಘಾಟನೆಗೆ ಹೋಗುತ್ತೇನೆ. ನನಗೆ ವಾರೆಂಟ್ ಕೊಟ್ಟಿಲ್ಲ, ಸಮನ್ಸ್ ಕೊಟ್ಟು ಬಂದಿದ್ದರು. ನನ್ನ ಮೇಲಿದ್ದ ಎಲ್ಲಾ ಕೇಸ್ ಗಳು ಖುಲಾಸೆಯಾಗಿದ್ದವು ಎಂಬುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು
BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1