ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ತನ್ನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯ ದೈನಂದಿನ ಹಾಜರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭ, ಸುರಕ್ಷಿತ ಮತ್ತು ಪಾರದರ್ಶಕಗೊಳಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಇಲಾಖೆಯ ಸಿಬ್ಬಂದಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಕರ್ನಾಟಕ ಅಡ್ವಾನ್ಸ್‌ಡ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ – ಕರ್ತವ್ಯ’ (KAAMS-Kartavya) ಮೊಬೈಲ್ ಅಪ್ಲಿಕೇಷನ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.ಈ ಅತ್ಯಾಧುನಿಕ ಡಿಜಿಟಲ್ ವ್ಯವಸ್ಥೆಯು ಇಲಾಖೆಯ ದೈನಂದಿನ ಕಾರ್ಯನಿರ್ವಹಣೆಯಲ್ಲಿ ದೊಡ್ಡ ಬದಲಾವಣೆ ತರಲಿದ್ದು, ಸಿಬ್ಬಂದಿಗಳು ಯಾವುದೇ ಅಡೆತಡೆಯಿಲ್ಲದೆ ತಮ್ಮ ಹಾಜರಾತಿಯನ್ನು ದಾಖಲಿಸಲು ನೆರವಾಗಲಿದೆ.
ಎಲ್ಲಾ ಸ್ಮಾರ್ಟ್ ಫೋನ್ ಗಳಲ್ಲೂ ಲಭ್ಯ:
ಈ ಆ್ಯಪ್ ಅನ್ನು ಎಲ್ಲಾ ವರ್ಗದ ಸಿಬ್ಬಂದಿ ಸುಲಭವಾಗಿ ಬಳಸಬಹುದಾಗಿದ್ದು, ಸಂಪೂರ್ಣವಾಗಿ ಉಚಿತವಾಗಿ ಲಭ್ಯವಿದೆ.
ಆಂಡ್ರಾಯ್ಡ್ ಬಳಕೆದಾರರು: ಗೂಗಲ್ ಪ್ಲೇ ಸ್ಟೋರ್ (Google Play Store) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಐಫೋನ್ ಬಳಕೆದಾರರು: ಆ್ಯಪಲ್ ಆ್ಯಪ್ ಸ್ಟೋರ್ (Apple App Store) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಎಲ್ಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ತಡ ಮಾಡದೆ ಇಂದೇ ತಮ್ಮ ಮೊಬೈಲ್‌ನಲ್ಲಿ ‘ಕರ್ತವ್ಯ’ (KAAMS-Kartavya) ಆ್ಯಪ್ ಡೌನ್‌ಲೋಡ್ ಮಾಡಿಕೊಂಡು, ಈ ವಿನೂತನ ಡಿಜಿಟಲ್ ವ್ಯವಸ್ಥೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.








