ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಲಿದ್ದಾರೆ. ಆದರೆ ನಾರಾಯಣಗೌಡ ಅವರು ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು ಎರಡು ಠಾಣೆಯ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಹೌದು ಹಳೆ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ.
ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ.
ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಹಲಸೂರ್ ಗೇಟ್ ಠಾಣೆ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.