ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯಲ್ಲಿರುವಂತ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ವಾಣಿಜ್ಯ ಮಳಿಗೆಗಳ ಬೋರ್ಡ್ ಹೊಡೆದು ಹಾಕಿ, ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದಂತ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ, ಕೈಗಾರಿಕೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಯುವಂತೆ ಆಗ್ರಹಿಸಿ ಕೆಲ ದಿನಗಳ ಹಿಂದೆ ಕರವೇಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರು ಕನ್ನಡದಲ್ಲಿ ಬೋರ್ಡ್ ಹಾಕದ ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಹೊಡೆದು ಹಾಕಿದ್ದರು.
ಈ ಸಂಬಂಧ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ 32 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಾರಾಯಣಗೌಡ ಸೆಂಟ್ರಲ್ ಜೈಲು ಸೇರಿದ್ದರು. ಇವರಲ್ಲದೇ 32 ಕರವೇ ಕಾರ್ಯಕರ್ತರು ಕೂಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಕರವೇ ಅಧ್ಯಕ್ಷ ನಾರಾಯಣಗೌಡ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ನ್ಯಾಯಮೂರ್ತಿ ಬಿರಾದಾರ ದೇವೇಂದ್ರಪ್ಪ ಅವರು, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.
ಇಂದು ನ್ಯಾಯಮೂರ್ತಿ ಬಿರಾದಾರ ದೇವೇಂದ್ರಪ್ಪ ಅವರು ತಮ್ಮ ತೀರ್ಪು ಪ್ರಕಟಿಸಿದ್ದು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಹೀಗಾಗಿ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗೋ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದ ‘ಮಾಜಿ ಪ್ರಧಾನಿ HDD’ಗೆ, ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು